IPL 2024: ಸ್ಯಾಮ್ ಕರನ್, ಲಿವಿಂಗ್‌ಸ್ಟೋನ್ ಅಬ್ಬರಕ್ಕೆ ತಲೆಬಾಗಿದ ಡೆಲ್ಲಿ

ಚಂಡೀಗಢ: ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.
ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 17ನೇ ಆವೃತ್ತಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವು 4 ಎಸೆತಗಳು ಬಾಕಿ ಇರುವಂತೆ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ ಗೆಲುವು ಸಾಧಿಸಿದೆ.
ಪಂಜಾಬ್ ಪರ ಸ್ಯಾಮ್ ಕರನ್ 63 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 38 ರನ್ ಗಳಿಸಿದರು.