IPL 2024 | MIvsSRH: ಆರ್‌ಸಿಬಿ ದಾಖಲೆ ಮುರಿದ ಹೈದರಾಬಾದ್ - ಮುಂಬೈಗೆ 278 ರನ್‌ಗಳ ಬೃಹತ್ ಗುರಿ

ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್ ಹಾಗೂ ಹೆನ್ರಿಚ್ ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್‌ಗೆ 278 ರನ್‌ಗಳ ಬೃಹತ್ ಗುರಿ ನೀಡಿದೆ. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದ್ದ ಅತ್ಯಧಿಕ ಸ್ಕೋರ್ (263 ರನ್) ದಾಖಲೆಯನ್ನು ಹೈದರಾಬಾದ್ ತಂಡವು ಮುರಿದಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 17ನೇ ಆವೃತ್ತಿಯ 8ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡವು 3 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿ ಸಿಡಿಸಿದೆ.
ಹೈದರಾಬಾದ್ ಪರ ಹೆನ್ರಿಚ್ ಕ್ಲಾಸೆನ್ 80 ರನ್, ಟ್ರಾವಿಸ್ ಹೆಡ್ 62 ರನ್, ಅಭಿಷೇಕ್ ಶರ್ಮಾ 63 ರನ್ ಹಾಗೂ ಐಡೆನ್ ಮಾರ್ಕ್ರಾಮ್ 42 ರನ್ ಚಚ್ಚಿದರು.