IPL 2024 | RCBvsCSK ಪಂದ್ಯಕ್ಕೆ ಮಳೆ ಅಡ್ಡಿ

IPL 2024 | RCBvsCSK ಪಂದ್ಯಕ್ಕೆ ಮಳೆ ಅಡ್ಡಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿದೆ. 

ಟಾಸ್ ಸೋತು‌ ಬ್ಯಾಟಿಂಗ್ ಆರಂಭಿಸಿರುವ ಆರ್ಸಿಬಿ 3 ಓವರ್ ಮುಕ್ತಾಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 31 ರನ್ ಕಲೆಹಾಕಿದೆ. 3ನೇ ಓವರ್ನಲ್ಲಿ ವಿರಾಟ್ ಕೊಹ್ಲಿ 2 ಸಿಕ್ಸರ್ ಬಾರಿಸಿದರು. ಸದ್ಯ ವಿರಾಟ್ ಕೊಹ್ಲಿ 19 ರನ್ (9 ಎಸೆತ) ಹಾಗೂ ನಾಯಕ ಫಾಫ್ ಡು ಪ್ಲೆಸ್ಸಿಸ್ 12 ರನ್ (9 ಎಸೆತ) ಗಳಿಸಿ ವಿಕೆಟ್ ಕಾಯ್ದುಕೊಂಡಿದ್ದಾರೆ.