IPL 2025: ಮುಂಬೈ ವಿರುದ್ಧ 12 ರನ್ ಗಳಿಂದ ಆರ್ ಸಿಬಿಗೆ ಭರ್ಜರಿ ಗೆಲುವು

ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ರನ್ ಗಳಿಂದ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2025ರ ಟೂರ್ನಿಯ 20ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ 5 ವಿಕೆಟ್ ನಷ್ಟಕ್ಕೆ 221 ರನ್ ಕಲೆಹಾಕಿತ್ತು. ಬಳಿಕ 222 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡವು 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.