IPL 2025: ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ

ನವದೆಹಲಿ: ಕೃನಾಲ್ ಪಾಂಡ್ಯ, ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ದೇಶದ ರಾಜಧಾನಿ ನವದೆಹಲಿಯಲ್ಲಿ ಇಂದು ನಡೆದ ಐಪಿಎಲ್ 2025ರ 46ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆರ್‌ಸಿಬಿ 18.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ ಗೆಲುವು ಸಾಧಿಸಿದೆ. ಆರ್‌ಸಿಬಿ ಪರ ಕೃನಾಲ್ ಪಾಂಡ್ಯ ಅಜೇಯ 73 ರನ್, ವಿರಾಟ್ ಕೊಹ್ಲಿ 51 ರನ್ ಹಾಗೂ ಟೀಂ ಡೇವಿಡ್ 19 ರನ್ ಗಳಿಸಿದರು.
ಇದಕ್ಕೂ ಮುನ್ನ ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ 3 ವಿಕೆಟ್, ಜೋಶ್ ಹ್ಯಾಜಲ್‌ವುಡ್ 2 ವಿಕೆಟ್, ಯಶ್ ದಯಾಳ್ ಹಾಗೂ ಕೃನಾಲ್ ಪಾಂಡ್ಯ ತಲಾ 1 ವಿಕೆಟ್ ಪಡೆದುಕೊಂಡಿದ್ದರು.