ಹು-ಧಾ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ IPS ಎನ್ ಶಶಿಕುಮಾರ್

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೂತನವಾಗಿ ಪೊಲೀಸ್ ಕಮಿಷನರ್ ಆಗಿ IPS ಎನ್ ಶಶಿಕುಮಾರ ಅಧಿಕಾರ ಸ್ವೀಕರಿಸಿದ್ದಾರೆ.
ಎಸ್ ಕಳೆದು ಕೆಲವು ತಿಂಗಳಿಂದ ಅವಳಿ ನಗರದಲ್ಲಿ ಕ್ರೈಂಗಳ ಹಾವಳಿ ಹೆಚ್ಚಾಗಿತ್ತು. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ. ಆ ಹುದ್ದೆಗೆ ಎನ್ ಶಶಿಕುಮಾರ್ ಅವರನ್ನು ನೇಮಕ ಮಾಡಿದ್ದರು. ಇನ್ನು ನೂತನ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ IPS ಎನ್ ಶಶಿಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.