ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ : ಉದ್ವಿಗ್ನ ಸ್ಥಿತಿ

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ : ಉದ್ವಿಗ್ನ ಸ್ಥಿತಿ

ಜೆರುಸಲೇಂ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ ನಡೆಸಿದೆ. 

ಇರಾನ್‌ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಶುಕ್ರವಾರ ದಾಳಿ ನಡೆಸಲಾಗಿದೆ. ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದ್ದು, ಉದ್ನಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ವಾಯು ರಕ್ಷಣಾ ಪಡೆಗಳು ಶೇಕಡಾ 100 ರಷ್ಟು ಕಾರ್ಯಾಚರಣೆಯ ಸಾಮರ್ಥ್ಯದಲ್ಲಿವೆ ಎಂದು ಹೇಳಿದೆ. 

ಇನ್ನೂ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. 

ಇರಾನ್ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಟೆಹ್ರಾನ್‌ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.