ಇಂದೋರ್: ವಿದೇಶದಲ್ಲಿ ನೆಲೆಸಿರುವ ಭಾರತೀಯರ ಬಗ್ಗೆ ಜೈಶಂಕರ್ ಶ್ಲಾಘನೆ!

ಇಂದೋರ್: ಭಾರತೀಯ ವಲಸಿಗರ ಪರಿಶ್ರಮ ಮತ್ತು ಯಶಸ್ಸನ್ನು ಪ್ರಪಂಚದಾದ್ಯಂತ ಚೆನ್ನಾಗಿ ಗುರುತಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿನಂದಿಸಿದ್ದಾರೆ.
ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಸಮಾವೇಶದ ಸಂದರ್ಭದಲ್ಲಿ ಯುಎಸ್ ಮತ್ತು ಕೆನಡಾ ಬಂದ ಪ್ರವಾಸಿಗರನ್ನು ಭೇಟಿ ಮಾಡಿ ಮಾತನಾಡಿದರು.
ವಿದೇಶದಲ್ಲಿ ನೆಲೆಸಿರುವ ಭಾರತೀಯರು ತಮ್ಮ ಶ್ರಮ, ಕೌಲಶ್ಯ, ಬದ್ಧತೆಯಿಂದ ದೇಶದ ಹಿರಿಮೆಯನ್ನು ಹೆಚ್ಚಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.