ಹಾಸನ : ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಜೆಎನ್1 ಸೋಂಕು
ಹಾಸನ: ಜಿಲ್ಲೆಯಲ್ಲಿ ಮಂಗಳವಾರ ಸಹ ಹೊಸದಾಗಿ ನಾಲ್ವರಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್ 1 ಪತ್ತೆಯಾಗಿದೆ.
ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಎಂಟಕ್ಕೆ ಏರಿಕೆಯಾದಂತಾಗಿದೆ. ಎಲ್ಲ ಸೋಂಕಿತರನ್ನೂ ಹೋಂ ಐಸೋಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಬುಧವಾರದಿಂದ ಕೊರೊನಾ ಟೆಸ್ಟ್ ಹೆಚ್ಚಳಕ್ಕೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 199 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಈವರೆಗೆ 9 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.
ಚನ್ನರಾಯಪಟ್ಟಣ ಮೂಲದ 65 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದಾರೆ.