49ನೇ ‘ಸಿಜೆಐ’ ಆಗಿ ಯು.ಯು ಲಲಿತ್ ಅಧಿಕಾರ ಸ್ವೀಕಾರ

14 ತಿಂಗಳ ಕಾಲ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದ ನ್ಯಾ.ಎನ್.ವಿ.ರಮಣ ನಿನ್ನೆ ನಿವೃತ್ತರಾಗಿದ್ದಾರೆ. ಇವರ ಉತ್ತರಾಧಿಕಾರಿಯಾಗಿ ಹಾಗೂ ಸುಪ್ರೀಂ ಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಉದಯ್ ಉಮೇಶ್ ಲಲಿತ್ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೂತನ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ನಿರ್ಗಮಿತ ಚೀಫ್ ಜಸ್ಟೀಸ್ ಆಫ್ ಇಂಡಿಯಾ (ಸಿಜೆಐ ) ಎನ್.ವಿ.ರಮಣ ಕೂಡ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಭಾಗಿಯಾಗಿದ್ದರು.
ಜಸ್ಟೀಸ್ ಯುಯು ಲಲಿತ್ ಅವರು ಕೇವಲ 74 ದಿನಗಳವರೆಗೆ ಮಾತ್ರ ಚೀಫ್ ಜಸ್ಟೀಸ್ ಆಫ್ ಇಂಡಿಯಾ ಆಗಿರಲಿದ್ದಾರೆ. ನವೆಂಬರ್ 8ಕ್ಕೆ ಅವರು ನಿವೃತ್ತರಾಗಲಿದ್ದಾರೆ.