ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಬಹುಭಾಷಾ ನಟ ಕಮಲ್ ಹಾಸನ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸೂಪರ್‌ಸ್ಟಾರ್‌ ಕಮಲ್ ಹಾಸನ್ ಅವರಿಗೆ ಜ್ವರ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ನಂತರ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 

ಕಮಲ್ ಹಾಸನ್ ಅವರು ನವೆಂಬರ್ 23ರಂದು ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ (SRMC) ದಾಖಲಾಗಿದ್ದರು. ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ನವೆಂಬರ್ 24ರಂದು ಗುರುವಾರ ಡಿಸ್ಚಾರ್ಜ್ ಆಗಲಿದ್ದಾರೆ.