'ಕಾಂಗ್ರೆಸ್' ಕೈಕೊಟ್ಟ ಕಪಿಲ್ ಸಿಬಲ್; ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಖ್ಯಾತ ವಕೀಲರಾದ ಕಪಿಲ್ ಸಿಬಲ್ ಅವರು ಕಾಂಗ್ರೆಸ್ ತೊರೆದು, ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹೌದು. 15 ರಾಜ್ಯಗಳ 57 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ಬಾರಿಯ ಚುನಾವಣೆಯ ಬಹುದೊಡ್ಡ ಬೆಳವಣಿಗೆ ಏನೆಂದರೆ ಇದುವರೆಗೆ ಕಪಿಲ್ ಸಿಬಲ್ ಅವರು ಈ ಬಾರಿ ಸಮಾಜವಾದಿ ಪಕ್ಷದ ಕೋಟಾದಿಂದ ರಾಜ್ಯಸಭೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಸಿಬಲ್ ಅವರು ಕಾಂಗ್ರೆಸ್ ಹೈಕಮಾಂಡ್ ಮೇಲೆ, ವಿಶೇಷವಾಗಿ ರಾಹುಲ್ ಗಾಂಧಿಯ ಮೇಲೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅವರನ್ನು ರಾಜ್ಯಸಭೆಗೆ ಕಳುಹಿಸುವುದು ಕಷ್ಟ ಎಂದು ನಂಬಲಾಗಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ಕಪಿಲ್ ಸಿಬಲ್ ಅವರು ಸಮಾಜವಾದಿ ಪಕ್ಷದ ಕಚೇರಿಗೆ ತೆರಳಿ ಅಖಿಲೇಶ್ ಯಾದವ್ ಅವರೊಂದಿಗೆ ಚರ್ಚೆ ನಡೆಸಿದ್ದರು.