ಕರ್ನಾಟಕ ಬಂದ್: ಕವಿವಿ ಸ್ನಾತಕ ಪದವಿ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಆಗ್ರಹಿಸಿ ಶುಕ್ರವಾರದಂದು ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ ಹಿನ್ನೆಲೆಯಲ್ಲಿ, ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು ಮೂಂದೂಡಲಾಗಿದೆ.
ಮುಂದೂಡಲಾಗಿರುವ ಪರೀಕ್ಷೆಗಳನ್ನು ದಿನಾಂಕ 03-10-2023 ರಂದು ಪರಿಷ್ಕೃತ ವೇಳಾಪಟ್ಟಿಯ ಸಮಯದಂತೆ ಜರುಗಿಸಲಾಗುವುದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಸಿ.ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.