ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ - ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?
ಬೆಂಗಳೂರು: ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
39 ಸಂಘಟನಾತ್ಮಕ ಜಿಲ್ಲೆಗಳ ಪೈಕಿ 30 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರುಗಳನ್ನ ನೇಮಕ ಮಾಡಲಾಗಿದೆ. ಇನ್ನುಳಿದ 9 ಜಿಲ್ಲೆಗಳಿಗೆ ಹಿಂದಿನ ಜಿಲ್ಲಾಧ್ಯಕ್ಷರನ್ನೇ ಮತ್ತೊಂದು ಅವಧಿಗೆ ಮುಂದುವರಿಸಲಾಗಿದೆ.