Karnataka Budget 2024: ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

ಬೆಂಗಳೂರು: 2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂಪಾಯಿಗಳ S-GST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.