ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದಕ್ಕೆ ಸಿಎಂ ಬೊಮ್ಮಾಯಿ ಬೇಸರ

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಘಟನೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲ ನಾಯಕರು ಖಂಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, 'ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು' ಎಂದು ತಿಳಿಸಿದ್ದಾರೆ.