ಹೋಗಿ ಬಾ ಕಂದ ಮುತ್ತಿಕ್ಕಿ ಭಾವುಕ ವಿದಾಯ ಹೇಳಿದ ಸಿಎಂ: ಅಪ್ಪುಗೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಪತ್ನಿ ಗೆ ಹಸ್ತಾಂತರ

ನಟ ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿಯನ್ನು ಯಾರಿಗೂ ಅರಗಿಸಿಕೊಳ್ಳಲಾಗುತ್ತಿಲ್ಲ. ಅಪ್ಪು ಇಷ್ಟು ಬೇಗ ನಮ್ಮನ್ನೆಲ್ಲಾ ಅಗಲುವರು ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಆದ್ರೆ ವಿಧಿಯಾಟ ದೇವರ ಪಾದ ಸೇರಿದ ಬೆಟದ ಹೂ ಇಲ್ಲವೆಂಬುವುದು ಕಟು ಸತ್ಯ. ಸದ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಟನನ್ನು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಹೋಗಿದ್ದು ಸರಿಯಲ್ಲ, ಪುನೀತ್ ಸಾವು ಅನ್ಯಾಯ, ದೇವರು ಈ ರೀತಿ ಮಾಡಿ ಮೋಸ ಮಾಡಿದ ಅಂತ ಲಕ್ಷಗಟ್ಟಲೇ ಮನಸ್ಸುಗಳು ಭಗವಂತನಿಗೆ ಶಾಪ ಹಾಕುತ್ತಿವೆ. ಪುನೀತ್ ರಾಜ್ಕುಮಾರ್ಗೆ ಧೃತಿ, ವಂದಿತಾ ಎಂಬ ಇಬ್ಬರು ಹೆಣ್ಣು ಮಕ್ಕಳು. ಹೀಗಾಗಿ ವಿನಯ್ ರಾಜ್ ಕುಮಾರ್ ಅವರು ಚಿಕ್ಕಪ್ಪನ ಅಂತ್ಯಸಂಸ್ಕಾರದ ವಿಧಿ-ವಿಧಾನ ನೆರವೇರಿಸಲಿದ್ದಾರೆ.
ಪುನೀತ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ, ವಂದಿತಾ ಆಕ್ರಂದನ ಮುಗಿಲುಮುಟ್ಟಿದೆ. ಶಿವರಾಜ್ಕುಮಾರ್ ಕೂಡ ತಮ್ಮನನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ನಿನ್ನೆಯೇ ತಮ್ಮನ ಶವದ ಪಕ್ಕದಲ್ಲಿ ಕೂತು ಬಿಕ್ಕಿ ಬಿಕ್ಕಿ ಅತ್ತರು.
ಸದ್ಯ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವದ ಜೊತೆ ಅಪ್ಪು ನನ್ನು ಕಳಿಸಿಕೊಡಲಾಗುವುದು. ಪೊಲೀಸರು ಮೂರು ಸುತ್ತು ಕುಶಾಲು ತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿದ್ದಾರೆ. ರಾಜಕೀಯ ಗಣ್ಯರು, ಕುಟುಂಬಸ್ಥರು ಅಪ್ಪು ಪಾರ್ಥಿವ ಶರೀರಕ್ಕೆ ಕೊನೆಯದಾಗಿ ಗೌರವ ಸಲ್ಲಿಕೆ ಮಾಡಿದ್ದಾರೆ. ಎರಡು ನಿಮಿಷಗಳ ಮೌನಾಚರಣೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ಕುಮಾರ್ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ, ವಂದಿತಾಗೆ ಹಸ್ತಾಂತರಿಸಿದ್ದಾರೆ.