ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಕಡ್ಡಾಯ - ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಕಡ್ಡಾಯ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯ ಮಾಡುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 226ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಲು ಕೃಷ್ಣಮೂರ್ತಿ ಕಾರಣವಾಗಿದ್ದಾರೆ. ಜೊತೆಗೆ, ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೂ ಕೃಷ್ಣಮೂರ್ತಿ ಕಾರಣ ಅಂತ ತಿಳಿಸಿದರು. 

ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.