ಬ್ರೇಕಿಂಗ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬ್ರೇಕಿಂಗ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಶೇ.3.7 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. 

ಕಳೆದ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಸಿಗಲಿದ್ದು, ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282 ಕೋಟಿ ಭರಿಸಲಿದೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಇದು ಲಕ್ಷಾಂತರ ನೌಕರರಿಗೆ ದೀಪಾವಳಿ ಗಿಫ್ಟ್ ಸಿಕ್ಕಂತ್ತಾಗಿದೆ.