ಬೆಳಗಾವಿ: ಕರ್ನಾಟಕ ರಾಜ್ಯ ಆರ್ಥಿಕವಾಗಿ ಸಬಲವಾಗಿದೆ - ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕರ್ನಾಟಕ ರಾಜ್ಯ ಆರ್ಥಿಕವಾಗಿ ಸಬಲವಾಗಿದೆ - ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಸಮರ್ಪಕವಾಗಿ‌ ಅನುಷ್ಠಾನಗೊಳಿಸಿಯೂ ಕರ್ನಾಟಕ ರಾಜ್ಯ ಆರ್ಥಿಕವಾಗಿ ಸಬಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಸರಕಾರ‌ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಒಂದು ವೇಳೆ ದಿವಾಳಿಯಾಗಿದ್ದರೆ ಪಂಚ ಗ್ಯಾರಂಟಿ‌ ಯೋಜನೆಗಳನ್ನು ಮತ್ತು ಇತರೆ ಅಭಿವೃದ್ಧಿ ಯೋಜನೆ‌ ಜಾರಿಗೊಳಿಸಲು ಹೇಗೆ ಸಾಧ್ಯವಿತ್ತು ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು