ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯ 70ನೇ ಅಂತರ್ ಕಾಲೇಜು ಕ್ರೀಡಾಕೂಟ

ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ 70ನೇ ಅಂತರ್ ಕಾಲೇಜು ಕ್ರೀಡಾಕೂಟಕ್ಕೆ ನಗರದ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು.
ಧಾರವಾಡ ಕರ್ನಾಟಕ ಕಾಲೇಜು ವತಿಯಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಕರ್ನಾಟಕ ವಿವಿ ವ್ಯಾಪ್ತಿಯಲ್ಲಿ ಬರುವ 70 ಕಾಲೇಜುಗಳ 600 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಒಟ್ಟು 60 ವಿವಿಧ ಕ್ರೀಡೆಗಳು ನಡೆಯಲಿದ್ದು, ಉತ್ಸಾಹದಿಂದ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ ದೃಶ್ಯಗಳು ಕಂಡುಬಂದವು.