ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ನವೆಂಬರ್ 22) ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಾತ್ರವಲ್ಲದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.