KEA PGCETಅಂತಿಮ ಫಲಿತಾಂಶ ಪ್ರಕಟ

KEA PGCETಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ. 

ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದಕ್ಕೆ ಡಿಸೆಂಬರ್‌ 5 ಕೊನೆ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 

ಯುಜಿ ಆಯುಷ್: 

ಈ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಸಂಜೆ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಡಿಸೆಂಬರ್‌ 4ರ ಬೆಳಿಗ್ಗೆ 11 ಗಂಟೆಯೊಳಗೆ ಕೆಇಎ ಇ-ಮೇಲ್ ಗೆ ಕಳುಹಿಸಬೇಕು. ಅವುಗಳ ಪರಿಶೀಲನೆ ನಂತರ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.