ಐಪಿಎಲ್ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ..! 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್

ಐಪಿಎಲ್ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ..! 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್

ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಸ್ಟಾರ್ ಬ್ಯಾಟರ್‌ ವಿರಾಟ್‌ ಕೊಹ್ಲಿ ಮತ್ತೊಂದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇಂದು 29 ರನ್‌ ಬಾರಿಸುವ ಮೂಲಕ ಒಟ್ಟಾರೆ ಐಪಿಎಲ್‌ ಇತಿಹಾಸದಲ್ಲಿ 8000 ರನ್‌ ಗಡಿ ದಾಟಿದ ಮೊದಲ ಬ್ಯಾಟ್ಸ್‌ಮನ್‌ ಆಗಿದ್ದಾರೆ. 252 ಪಂದ್ಯಗಳ 244 ಇನ್ನಿಂಗ್ಸ್‌ಗಳನ್ನು ಆಡಿರುವ ಕೊಹ್ಲಿ 8 ಶತಕ ಮತ್ತು 55 ಅರ್ಧ ಶತಕ ಬಾರಿಸಿದ್ದಾರೆ. 

ಈ ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿ, ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ. 

ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್‌ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳ ದಾಖಲೆಯನ್ನು ಪೂರ್ಣಗೊಳಿಸಿದ ನಂತರ, ಇಲ್ಲಿಯವರೆಗೆ ಯಾವುದೇ ಆಟಗಾರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳ ವಿಷಯದಲ್ಲಿ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ. 

ಈ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿರುವ 15 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 741 ರನ್ ಬಾರಿಸಿದ್ದಾರೆ. ಇದರೊಂದಿಗೆ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ನೇ ಆಟಗಾರ ಎನಿಸಿಕೊಂಡಿದ್ದಾರೆ.