ಕೆಎಂಎಫ್ ನೂತನ ಉತ್ಪನ್ನಗಳ ಬಿಡುಗಡೆ - ನಟ ಶಿವರಾಜ್ ಕುಮಾರ್‌ಗೆ ಸಿಎಂ ಸನ್ಮಾನ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ ನ ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಡುಗಡೆಗೊಳಿಸಿದರು.
ಗೃಹಕಚೇರಿ ಕೃಷ್ಣಾದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ನೂತನ ಬ್ರ್ಯಾಂಡ್ ರಾಯಭಾರಿಯೂ ಆಗಿರುವ ನಟ ಶಿವರಾಜ್ ಕುಮಾರ್ ಅವರನ್ನು ಸಿಎಂ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸೇರಿದಂತೆ ಮತ್ತಿತರ ಅಧಿಕಾರಿಗಳು, ಕೆಎಂಎಫ್ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.