ಕುಂಭಮೇಳದ ಕಾಲ್ತುಳಿತ: ಮೃತ 11 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಬಿಹಾರ ಸರ್ಕಾರ

ಪಾಟ್ನಾ: ಮಹಾ ಕುಂಭಮೇಳದಲ್ಲಿ 30 ಜನರು ಸಾವನ್ನಪ್ಪಿದ ಕಾಲ್ತುಳಿತದಲ್ಲಿ ಮೃತಪಟ್ಟ ರಾಜ್ಯದ 11 ಭಕ್ತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಗೊಂಡ ಭಕ್ತರಿಗೆ ಸರ್ಕಾರ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದೆ. ಮೌನಿ ಅಮವಾಸ್ಯೆಯ ದಿನವಾದ ಬುಧವಾರ ನಸುಕಿನಲ್ಲಿ ಮಹಾ ಕುಂಭಮೇಳದ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಪುಣ್ಯಸ್ನಾನ ಮಾಡಲು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ್ದ ಯಾತ್ರಿಗಳ ನೂಕುನುಗ್ಗಲಿನಿಂದಾಗಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 40 ಜನರು ಮೃತಪಟ್ಟಿದ್ದು, 60 ಜನರು ಗಾಯಗೊಂಡಿದ್ದಾರೆ.
ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕಾರಣಗಳನ್ನು ಕಂಡು ಹಿಡಿಯಲು ನಿವೃತ್ತ ನ್ಯಾಯಾಧೀಶ ಹರ್ಷಕುಮಾರ್ ನೇತೃತ್ವದಲ್ಲಿ ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸಿದೆ. ತನಿಖೆಯನ್ನು ಪೂರ್ಣಗೊಳಿಸಲು ಆಯೋಗಕ್ಕೆ ಒಂದು ತಿಂಗಳು ಸಮಯಾವಕಾಶವಿದೆ.