ರಾಮನ ಪ್ರಾಣ ಪ್ರತಿಷ್ಠಾಪನೆ - ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಧಾರವಾಡ : ನಾಳೆ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಇಡೀ ದೇಶವೇ ಈ ಸಂದರ್ಭವನ್ನು ದೊಡ್ಡ ಹಬ್ಬದಂತೆ ಆಚರಣೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಧಾರವಾಡದ ಪ್ರಭಾರ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿದ್ದಾರೆ.
ಜ.21 ರ ಸಂಜೆ 6 ಗಂಟೆಯಿಂದ ಜ.23 ರ ಬೆಳಿಗ್ಗೆ 9 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸಾಗಾಟಕ್ಕೆ ನಿಷೇಧ ಹೇರಲಾಗಿದೆ.