ಧಾರವಾಡ: ಜೂನ್ 3ರ ಮಧ್ಯರಾತ್ರಿಯಿಂದ ಜೂನ್ 4ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಬಂದ್

ಧಾರವಾಡ: ಜೂನ್ 4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಈ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಜೂನ್ 3ರ ಮಧ್ಯರಾತ್ರಿಯಿಂದ ಜೂನ್ 4ರ ಮಧ್ಯರಾತ್ರಿವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಸಂಗ್ರಹಣೆಯನ್ನು ನಿಷೇಧಿಸಿ, ಜೂನ್ 3 ಮತ್ತು ಜೂನ್ 4ರಂದು ಶುಷ್ಕ ದಿವಸಗಳೆಂದು ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.
ಈ ಆದೇಶ ಧಾರವಾಡ ಜಿಲ್ಲೆಯ ಎಲ್ಲ ವಿಧಾನಸಭಾ ಮತ ಕ್ಷೇತ್ರಗಳ ವ್ಯಾಪ್ತಿಗೂ ಸಂಬಂಧಿಸಿದ್ದಾಗಿದೆ. ಆದೇಶ ಜಾರಿ ಸಮಯದಲ್ಲಿ ಯಾವತ್ತೂ ಭಾರತೀಯ ಮದ್ಯ ತಯಾರಿಕೆಯ ಅಂಗಡಿಗಳು, ಬಿಯರ್, ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೊಗಳನ್ನು ಮುಚ್ಚತಕ್ಕದ್ದು ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್‌ಸ್ಪೆಕ್ಟರ್, ಉಪವಿಭಾಗದ ಅಬಕಾರಿ ಅಧೀಕ್ಷಕರು ಅವಶ್ಯಕತೆ ಕಂಡು ಬಂದಲ್ಲಿ ಶಾಂತಿ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅವರು ಆದೇಶದಲ್ಲಿ ತಿಳಿಸಿದ್ದಾರೆ.