ಲೋಕಸಭೆ ಚುನಾವಣೆ: ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಕಾಂಗ್ರೆಸ್‌ನಿಂದ ಭರ್ಜರಿ ಪ್ಲಾನ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಆರೇಳು ತಿಂಗಳು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಬಲಿಷ್ಠ ಅಭ್ಯರ್ಥಿ ಆಯ್ಕೆಯಾಗಿ ಭರ್ಜರಿ ಪ್ಲಾನ್‌ಗೆ ಮುಂದಾಗಿದೆ.
ಹೌದು. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಆಯಾಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಹತ್ವದ ಟಾಸ್ಕ್ ಅನ್ನು ರಾಜ್ಯ ಕಾಂಗ್ರೆಸ್ ನೀಡಿದೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ.ಶಿವಕುಮಾರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಎಲ್ಲಾ ಹಂತಗಳ ಮುಖಂಡರನ್ನು ಸಂಪರ್ಕಿಸಿ ಸಭೆಗಳನ್ನು ಆಯೋಜಿಸಿ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ ವರದಿ ನೀಡಲು ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಈ ಕೆಳಕಾಣಿಸಿದಂತೆ ಸಚಿವರುಗಳನ್ನು ವೀಕ್ಷಕರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.