ಲೋಕಸಭೆ ಚುನಾವಣೆ ಮುಕ್ತಾಯ : 46 ಡಿವೈಎಸ್‌ಪಿಗಳ ವರ್ಗಾವಣೆಗೊಳಿಸಿ ಸರ್ಕಾರದ ಆದೇಶ..!

ಬೆಂಗಳೂರು : ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಆಯೋಗ ವಾಪಸ್ ಪಡೆದಿದೆ. ಮಾದರಿ ಚುನಾವಣಾ ನೀತಿ ಸಂಹಿತೆ ವಾಪಸ್ ಪಡೆಯುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡಿದೆ. ೪೬ ಡಿವೈಎಸ್‌ಪಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಚುನಾವಣಾ ಪೂರ್ವದ ಸ್ಥಳಗಳಿಗೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.