ಹೊಸ ವರ್ಷಕ್ಕೆ ಸಿಹಿ ಸುದ್ದಿ: ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ತುಸು ಇಳಿಕೆಯಾಗಿದೆ. ಈ ಮೂಲಕ ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿವೆ.
ನವದೆಹಲಿಯಲ್ಲಿ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಂತಹ ವಿವಿಧ ಸಂಸ್ಥೆಗಳಲ್ಲಿ ಬಳಸುವ ವಾಣಿಜ್ಯ ಸಿಲಿಂಡರ್‌ನ ಬೆಲೆ ಇಂದಿನಿಂದ 1,757 ರೂ.ನಿಂದ 1,755.50 ರೂಪಾಯಿಗೆ ಇಳಿದಿದೆ. ಇನ್ನು ಮುಂಬೈನಲ್ಲಿ 1,710 ರೂ.ನಿಂದ 1,708.50 ರೂ.ಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ 5 ರೂ.ಗಳಷ್ಟು ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ 1,929 ರೂಪಾಯಿಯಿಂದ 1,924 ರೂ.ಗೆ ಇಳಿದಿದೆ. ಇನ್ನು ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 50 ಪೈಸೆ ಏರಿಕೆ ಕಂಡು 1,868.50 ರಿಂದ 1,869 ರೂಪಾಯಿ ಆಗಿದೆ.