ಅಬಕಾರಿ ನೀತಿ ಹಗರಣ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್‌

ಅಬಕಾರಿ ನೀತಿ ಹಗರಣ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್‌

ನವದೆಹಲಿ: ದೆಹಲಿಯಲ್ಲಿ ಪ್ರಸ್ತುತ ರದ್ದುಗೊಂಡಿರುವ ನೂತನ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. 

ಕೇಂದ್ರ ತನಿಖಾ ಸಂಸ್ಥೆಯು ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಅವರ ಪಾತ್ರದ ಕುರಿತಂತೆ ಭಾನುವಾರ ಬೆಳಿಗ್ಗೆಯಿಂದಲೇ ವಿಚಾರಣೆಗೆ ಒಳಪಡಿಸಿದ್ದರು. 9 ಗಂಟೆಗಳ ಕಾಲ ಅವರನ್ನು ಪ್ರಶ್ನಿಸಿದ ನಂತರ ಬಂಧಿಸಲಾಗಿದೆ. ಪ್ರಸ್ತುತ ಸಿಸೋಡಿಯಾ ಅವರನ್ನು ಸಿಬಿಐ ಕೇಂದ್ರ ಕಚೇರಿಯಲ್ಲಿ ಇರಿಸಲಾಗಿದೆ. ಕಚೇರಿ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅವರನ್ನು ಸೋಮವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.