ಮೇ 30ರವರೆಗೂ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಮೇ 30ರವರೆಗೂ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮೇ 30 ರವರೆಗೆ ವಿಸ್ತರಿಸಿದೆ. 

ಎಎಪಿ ನಾಯಕ ಮನೀಶ್ ಸಿಸೋಡಿಯಾ ತಮ್ಮ ಹಿಂದಿನ ಸಿಬಿಐ ಕಸ್ಟಡಿ ಅವಧಿ ಮುಗಿದ ನಂತರ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಕಾವೇರಿ ಬವೇಜಾ ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದ್ದಾರೆ. 

ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಮಾರ್ಚ್ 9 ರಂದು ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿಯನ್ನು ಬಂಧಿಸಿತ್ತು. ಸಿಸೋಡಿಯಾ ವಿರುದ್ಧದ ಆರೋಪಗಳನ್ನು ರೂಪಿಸುವ ಕುರಿತು ವಾದಗಳನ್ನು ಆಲಿಸುವುದನ್ನು ನ್ಯಾಯಾಲಯ ಮುಂದೂಡಿದೆ.