ಹಿಂದಿಯಲ್ಲಿ ಎಂಬಿಬಿಎಸ್ ಶಿಕ್ಷಣ- ಮಧ್ಯಪ್ರದೇಶದ ಸಚಿವರಿಂದ ಘೋಷಣೆ

ಹಿಂದಿಯಲ್ಲಿ ಎಂಬಿಬಿಎಸ್ ಶಿಕ್ಷಣ- ಮಧ್ಯಪ್ರದೇಶದ ಸಚಿವರಿಂದ ಘೋಷಣೆ

ಭೋಪಾಲ್: ರಾಜ್ಯದಲ್ಲಿ ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ (ಎಂಬಿಬಿಎಸ್) ಕೋರ್ಸ್ ಅನ್ನು ಹಿಂದಿಯಲ್ಲೂ ಕಲಿಸಲಾಗುವುದು ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಘೋಷಿಸಿದ್ದಾರೆ. ಭೋಪಾಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ' ಭೋಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜು ಏಪ್ರಿಲ್‌ನಿಂದ ಹಿಂದಿಯಲ್ಲಿ ಎಂಬಿಬಿಎಸ್ ಕೋರ್ಸ್ ಪ್ರಾರಂಭಿಸಲಿದೆ. ಮಾತೃಭಾಷೆಯಲ್ಲಿ ಕಲಿಯುವುದರಿಂದ ಸಹಾಯಕರವಾಗುವುದು ಮತ್ತು ಉತ್ತಮ ಫಲಿತಾಂಶಗಳನ್ನು ಗಳಿಸಬಹುದು ಎಂದು ವಿವಿಧ ಸಂಶೋಧನೆಗಳಿಂದ ತಿಳಿದುಬಂದಿದೆ ಎಂದು ಸಚಿವರು ಹೇಳಿದ್ದಾರೆ.