ಅ.2ರಂದು ವಧಾಲಯ, ಮಾಂಸ ಮಾರಾಟ ನಿಷೇಧ

ಧಾರವಾಡ: ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಧಾಲಯಗಳು ಹಾಗೂ ಎಲ್ಲ ಮಾಂಸ ಮಾರಾಟ ಮಾಡುವ ವ್ಯಾಪಾರಸ್ಥರು ತಮ್ಮ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಇದಕ್ಕೆ ವಿರುದ್ಧವಾಗಿ ಯಾರಾದರೂ ಮಾಂಸದ ಅಂಗಡಿಗಳನ್ನು ತೆಗೆದಲ್ಲಿ ಪಾಲಿಕೆಯಿಂದ ಅವರ ಪರವಾನಿಗಿಯನ್ನು ರದ್ದುಪಡಿಸಿ ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.