ನವಲಗುಂದ : ಸಿಎಂ ಆಗಮನ ಹಿನ್ನಲೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ

ನವಲಗುಂದ : ಸಿಎಂ ಆಗಮನ ಹಿನ್ನಲೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ

ನವಲಗುಂದ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಆಗಮಿಸುತ್ತಿರುವ ನಿಮಿತ್ಯ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನ ಅಧಿಕಾರಿಗಳೊಂದಿಗೆ ಶಾಸಕ ಎನ್.ಎಚ್.ಕೋನರಡ್ಡಿ ಪೂರ್ವಭಾವಿ ಸಭೆಯನ್ನು ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿದರು. 

ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ, ನವಲಗುಂದ ತಹಶಿಲ್ದಾರ ಸುಧೀರ ಸವಕಾರ, ಅಣ್ಣಿಗೇರಿ ತಹಶಿಲ್ದಾರ ಶಿವಾನಂದ ಹೆಬ್ಬಳ್ಳಿ, ಹುಬ್ಬಳ್ಳಿ ಇ.ಒ. ಡಾ. ಆರ್.ವಾಯ್.ಹೊಸಮನಿ, ನವಲಗುಂದ ಹಾಗೂ ಅಣ್ಣಿಗೇರಿ ಇ.ಒ ಭಾಗ್ಯಶ್ರಿ ಜಾಗಿರದಾರ, ಸದಾನಂದ ಅಮರಾಪುರ ಸೇರಿದಂತೆ ಇನ್ನೂ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.