ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮೆಟ್ರೋ ಸೇವೆ ಪುನಾರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮೆಟ್ರೋ ಸೇವೆ ಪುನಾರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮೆಟ್ರೋ ಸೇವೆ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಕೋವಿಡ್ ಅನ್ ಲಾಕ್ ನಿಂದಾಗಿ ಹಂತ ಹಂತವಾಗಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮುಂಜಾಗ್ರತೆ ಕ್ರಮ ಕೈಗೊಂಡು ಶೀಘ್ರದಲ್ಲೇ ಮೆಟ್ರೋ ಸೇವೆ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು. 

ಇನ್ನು ಈಗಾಗಲೇ ಸಾರಿಗೆ ಸೇವೆ ಬಹುತೇಕ ಆರಂಭವಾಗಿದ್ದು, ಅಂತಾರಾಜ್ಯ ಬಸ್ ಸಂಚಾರವನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಅಕ್ಟೋಬರ್ ತಿಂಗಳಲ್ಲಿ ಪದವಿ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಿದೆ ಎಂದರು.