ಮಿಲಿಟರಿ ಹೆಲಿಕಾಪ್ಟರ್ ದುರಂತ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ದೆಹಲಿ: ತಮಿಳುನಾಡಿನ ಕುನೂರಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದ್ದಾರೆ.