ಸಚಿವ ಆರ್. ಅಶೋಕ್‌ಗೆ ಕೊರೊನಾ ಪಾಸಿಟಿವ್

ಸಚಿವ ಆರ್. ಅಶೋಕ್‌ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಕೊಳ್ಳುವಂತೆ ಆರ್. ಅಶೋಕ್ ಮನವಿ ಮಾಡಿದ್ದಾರೆ.