ಮಾಜಿ ಸಿಎಂ ಹೆಚ್‌ಡಿಕೆ ಭೇಟಿ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ

ಮಾಜಿ ಸಿಎಂ ಹೆಚ್‌ಡಿಕೆ ಭೇಟಿ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಿಕೊಂಡರು. 

ಜೆಪಿನಗರದ ಹೆಚ್ಡಿಕೆ ನಿವಾಸಕ್ಕೆ ಆಗಮಿಸಿದ ಸಚಿವರೊಂದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೆಲ ಹೊತ್ತು ರಾಜಕೀಯ ವಿಚಾರವಾಗಿ ಚರ್ಚೆ ನಡೆಸಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಬೆಂಗಳೂರು ಗ್ರಾಮಾಂತರವು ಸೇರಿದಂತೆ ಎಲ್ಲ ನಾಲ್ಕು ಕ್ಷೇತ್ರದಲ್ಲಿ ದೋಸ್ತಿ ಪಕ್ಷದ ಅಭ್ಯರ್ಥಿಗಳೇ ಗೆಲ್ಲಬೇಕೆಂದು ಆ ನಿಟ್ಟಿನಲ್ಲಿ ಜೊತೆಯಾಗಿ ಕೆಲಸ ಮಾಡೋಣವೆಂಬ ಭರವಸೆಯನ್ನು ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕುಮಾರಣ್ಣ ನೀಡಿದರೆಂದು ಜೆಪಿಎಸ್ ಆಪ್ತ ಮೂಲಗಳು ತಿಳಿಸಿವೆ.