ಬ್ರೇಕಿಂಗ್ : ಸಚಿವ ಉಮೇಶ್ ಕತ್ತಿ ಇನ್ನಿಲ್ಲ
ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕ, ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರಿಗೆ ಮಂಗಳವಾರ ರಾತ್ರಿ 10. 30ಕ್ಕೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡಿದೆ.
ಈ ವೇಳೆ ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತಾದರೂ ಸಚಿವರು ಬದುಕುಳಿಯಲ್ಲಿಲ್ಲ.