ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಸಕ ನರೇಂದ್ರ ಸ್ವಾಮಿ ನೇಮಕ - ಸಂಪುಟ ದರ್ಜೆಯ ಸಚಿವ ಸ್ಥಾನಮಾನ

ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಸಕ ನರೇಂದ್ರ ಸ್ವಾಮಿ ನೇಮಕ - ಸಂಪುಟ ದರ್ಜೆಯ ಸಚಿವ ಸ್ಥಾನಮಾನ

ಬೆಂಗಳೂರು: ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

ಈ ಸಂಬಂಧ ಸರ್ಕಾರವು ಇ-ಎಫ್‌ಸಿಸಿ 545 ಇಪಿಸಿ 2024 ದಿನಾಂಕ 05.02.2025ರ ಅಧಿಸೂಚನೆಯ ಮೂಲಕ ಆದೇಶ ಹೊರಡಿಸಿದ್ದು, ಈ ನೇಮಕಾತಿ ಅದೇ ದಿನಾಂಕದಿಂದ ಜಾರಿಗೆ ಬರಲಿದೆ. 

ಸಂಸ್ಥೆಯ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುವ ಅವಧಿಯಲ್ಲಿ, ಸಂಪುಟದ ದರ್ಜೆಯ ಸಚಿವ ಸ್ಥಾನಮಾನ ಹಾಗೂ ಸಂಪುಟದ ದರ್ಜೆಯ ಸಚಿವರಿಗೆ ಲಭ್ಯವಿರುವ ಎಲ್ಲ ಸೌಲಭ್ಯಗಳು ಅನ್ವಯ ವಾಗುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.