ಪಾಕಿಸ್ತಾನದ​​ ಹೊಸ ಪ್ರಧಾನಿ ಶೆಹಬಾಜ್ ಷರೀಫ್​ಗೆ ಶುಭಾಶಯ ಕೋರಿದ ಮೋದಿ

ಪಾಕಿಸ್ತಾನದ​​ ಹೊಸ ಪ್ರಧಾನಿ ಶೆಹಬಾಜ್ ಷರೀಫ್​ಗೆ ಶುಭಾಶಯ ಕೋರಿದ ಮೋದಿ

ನವದೆಹಲಿ: ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಆಯ್ಕೆ ಆಗಿರುವ ಶೆಹಬಾಜ್ ಷರೀಫ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಪಾಕ್​​ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತಾಡಿದ ಶೆಹಬಾಜ್ ಷರೀಫ್, "ಬಡತನ, ನಿರುದ್ಯೋಗ, ಗಡಿಯ ಸಮಸ್ಯೆಗಳನ್ನ ಭಾರತ ಮತ್ತು ಪಾಕಿಸ್ತಾನ ಜಂಟಿಯಾಗಿ ಪರಿಹರಿಸಬೇಕು. ಇದಕ್ಕಾಗಿ ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ನಿರ್ಣಯ ಕೈಗೊಳ್ಳುತ್ತೇವೆ" ಎಂದು ಹೇಳಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್ ಮಾಡಿ, "ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಎಚ್‌. ಇ. ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ಮುಕ್ತ, ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು" ಎಂದು ತಿಳಿಸಿದ್ದಾರೆ.