ಒಡಿಸಾಗೆ ಮೊದಲ ಬಿಜೆಪಿ ಮುಖ್ಯಮಂತ್ರಿ ಮೋಹನ್ ಮಾಝಿ

ಭುವನೇಶ್ವರ: ಒಡಿಸಾ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರನ್ನು ಆಯ್ಕೆ ಮಾಡಲಾಗಿದೆ.
147 ಸದಸ್ಯ ಬಲದ ಒಡಿಸಾ ವಿಧಾನಸಭೆಗೆ ನಾಲ್ಕು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯು ಬಹುಮತ ಸಾಧಿಸಿದೆ. ಸರಳ ಬಹುಮತ ಸಾಧಿಸಿರುವ ಬಿಜೆಪಿ, ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಶಾಸಕಾಂಗ ಪಕ್ಷದ ಸಭೆ ನಡೆಸಿತು. ಈ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಭೂಪೇಂದ್ರ ಯಾದವ್ ಅವರನ್ನು ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು.
ಸಭೆಯ ಬಳಿಕ ಮಾತನಾಡಿದ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರು, ಮೋಹನ್ ಚರಣ್ ಮಾಝಿ ಒಡಿಸಾ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.