ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರೀ ಮಳೆ ಬರಬಹುದು. ಮಳೆ ಜೊತೆಗೆ ಗುಡುಗು, ಸಿಡಿಲು, ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.