ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ವಿಧಿವಶ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ನಿಧನಾರಾಗಿದ್ದಾರೆ.
82 ವರ್ಷ ವಯಸ್ಸಿನ ಮುಲಾಯಂ ಸಿಂಗ್ ಯಾದವ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕಳೆದ ವಾರದಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ನಿಧನರಾಗಿದ್ದಾರೆ ಎಂದು ಪುತ್ರ, ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಖಚಿತಪಡಿಸಿದ್ದಾರೆ.