ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬಾಯ್ ಹೇಳಿದ ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ!

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ ಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ ಮನನೊಂದು, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪತ್ರದಲ್ಲಿ ಉಲ್ಲೇಖಿಸಿ, ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಕಲಘಟಗಿ ಕ್ಷೇತ್ರಕ್ಕೆ ಸಂತೋಷ ಲಾಡ್ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅದೇ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿಗೆ ಟಿಕೆಟ್ ನೀಡದ ಕಾರಣ ಮನನೊಂದು ಹೈಕಮಾಂಡ್‌ಗೆ ರಾಜೀನಾಮೆ ಪತ್ರ ಬರೆದಿದ್ದಾರೆ.