ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಏರಿಕೆ

ಉಚಿತ ಯೋಜನೆಗಳ ಖುಷಿಯಲ್ಲಿರುವ ರಾಜ್ಯದ ಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭರ್ಜರಿ ಶಾಕ್ ಕೊಟ್ಟಿದೆ. ಹೌದು ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದೆ. ಇನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವಂತೆ ಕೆಎಂಎಫ್ ಒಕ್ಕೂಟಗಳು ಮನವಿ ಮಾಡಿದ್ದವು. ಆದ್ರೆ ಸುದೀರ್ಘ ಚರ್ಚೆಯ ಬಳಿಕ ಇದೀಗ ಲೀಟರ್ ಗೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಮ್ಮತಿ ಸೂಚಿಸಿದ್ದಾರೆ.