ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ - ಎನ್‌ಟಿಎ ವಿರುದ್ಧ ಸುಪ್ರೀಮ್ ಕೋರ್ಟ್ ಅಸಮಾಧಾನ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ - ಎನ್‌ಟಿಎ ವಿರುದ್ಧ ಸುಪ್ರೀಮ್ ಕೋರ್ಟ್ ಅಸಮಾಧಾನ

ನವದೆಹಲಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ಕೇಂದ್ರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 

ಈ ಕುರಿತು ಸಲ್ಲಿಕೆಯಾದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದವನ್ನು ತಳ್ಳಿ ಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ಬದಲಾಗಿ ನಿಯಮದ ಉಲ್ಲಂಘನೆ ಆಗಿದೆ ಎಂದು ತುಷಾರ್ ಮೆಹ್ತಾ ವಾದಿಸಿದ್ದರು. ಇದಕ್ಕೆ ಉತ್ತರಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ಪ್ರಶ್ನೆ ಪತ್ರಿಕೆ ಸಿಕ್ಕ ಮೇಲೆ ಕೇವಲ ಪ್ರಶ್ನೆಗಳನ್ನು ಪರಿಹರಿಸಿದವರು? ಮತ್ತು ಕೇವಲ 45 ನಿಮಿಷಗಳಲ್ಲಿ 180 ಪ್ರಶ್ನೆಗಳ ನಿಖರ ಉತ್ತರಗಳನ್ನು ವಿದ್ಯಾರ್ಥಿಗಳು ಹೇಗೆ ನೆನಪಿಟ್ಟುಕೊಳ್ಳಲು ಸಾಧ್ಯ? ತುಷಾರ್ ಮೆಹ್ತಾ ಅವರ ವಾದ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.