ನವದೆಹಲಿ : ಬಿಎಲ್ ಸಂತೋಷ್ ಬಳಿಕ ಈಗ‌ ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ನವದೆಹಲಿ : ಬಿಎಲ್ ಸಂತೋಷ್ ಬಳಿಕ ಈಗ‌ ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ನವದೆಹಲಿ : ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ರನ್ನ ಭೇಟಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಇದೀಗ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅಮಿತ್ ಶಾ ಜೊತೆ ನಿಖಿಲ್ ಚರ್ಚೆ ನಡೆಸಿದ್ದಾರೆ. ಚನ್ನಪಟ್ಟಣ ಸೋಲಿನ ಬಗ್ಗೆ ನಿಖಿಲ್ ಗೆ ಅಮಿತ್ ಶಾ ಧೈರ್ಯ ಹೇಳಿ ಕಳಿಸಿದ್ದಾರೆ. 

ಅಲ್ಲದೆ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಮೈತ್ರಿ ಮುಂದುವರಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್ ಸೋಲಿನ ಬಳಿಕೆ ನಿಖಿಲ್ ಕುಮಾರಸ್ವಾಮಿ ಕೇಂದ್ರದ ಬಿಜೆಪಿ ನಾಯಕರನ್ನ ಭೇಟಿಯಾಗುತ್ತಿರೋದು ಕುತೂಹಲ ಮೂಡಿಸಿದೆ. 

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ , ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ನಿಖಿಲ್, ಮುಂದೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕವಾಗ್ತಾರೆ ಎಂಬ ಸುದ್ದಿ ನಡುವೆ ದೆಹಲಿಯಲ್ಲಿ ಎನ್‌ಡಿಎ ನಾಯಕರನ್ನ ನಿಖಿಲ್ ಕುಮಾರಸ್ವಾಮಿ ಭೇಟಿಯಾಗುತ್ತಿರೋದಕ್ಕೂ ಏನಾದರೂ ಸಂಬಂಧವಿದ್ಯಾ ಎಂಬ ಗುಸುಗುಸು ಚರ್ಚೆ ನಡೆಯುತ್ತಿದೆ.